ಮೈಸೂರು- ಶೀಘ್ರದಲ್ಲೇ ರಾಜ್ಯದ ಸಿಎಂ ಬದಲಾವಣೆ ಆಗುವುದು ಖಚಿತ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐ ಆ್ಯಮ್ ವೆರಿ ಕಾನ್ಫಿಡೆಂಟ್. ಯಡಿಯೂರಪ್ಪ ಅವರ ಸ್ಥಾನದಲ್ಲಿ ಬೇರೊಬ್ಬರು ಬರುವುದು ಪಕ್ಕಾ ಆಗಿದೆ. ದಿಲ್ಲಿಯಿಂದ ನನಗೆ ಮಾಹಿತಿ ಸಿಕ್ಕಿದೆ ಎಂದಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಈಗಾಗಲೇ ಯಡಿಯೂರಪ್ಪ ಅವರ ಮೇಲೆ ನಾನು ಭ್ರಷ್ಟಾಚಾರದ ಆರೋಪ ಮಾಡಿದ್ದೂ ಒಂದು ಕಾರಣ ಇರಬಹುದು. ಹೀಗಾಗಿ ಉಪಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಅವರನ್ನ ಕೆಳಗಿಳಿಸಲಾಗುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
PublicNext
04/11/2020 04:27 pm