ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕೊರೋನಾ ಅಬ್ಬರ ದಿನೇ ದಿನೇ ಹೆಚ್ಚಾಗುತ್ತಿದೆ. ಇದನ್ನು ಮೂರನೇ ಅಲೆ ಎಂದು ಕರೆಯಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿವೆ. ಇದನ್ನು ಮೂರನೇ ಅಲೆ ಎಂದು ಕರೆಯಬಹುದು.
ಆದ್ರೆ ಈ ಬಗ್ಗೆ ಜನತೆ ಆತಂಕ ಪಡುವ ಅಗತ್ಯ ಇಲ್ಲ. ಸರ್ಕಾರವು ನಿಯಮಿತವಾಗಿ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದೆ. ಕೊರೋನಾ ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ದೆಹಲಿಯಲ್ಲಿ ಕೋವಿಡ್-19 ರೋಗಿಗಳಿಗೆ ಉತ್ತಮ ಚಿಕಿತ್ಸೆ ಮತ್ತು ಆರೋಗ್ಯ ಸೌಲಭ್ಯಗಳನ್ನು ನೀಡುವುದು ಮತ್ತು ಸಾವಿನ ಪ್ರಮಾಣವನ್ನು ಸಾಧ್ಯವಾದಷ್ಟು ಕಡಿಮೆ ಮಾಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದರು.
PublicNext
04/11/2020 05:01 pm