ನವದೆಹಲಿ: ಧಾರವಾಡ ಸಮೀಪದ ತಡಸಿನಕೊಪ್ಪ ಕ್ರಾಸ್ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಕಚೇರಿಯು ಟ್ವೀಟ್ ಮಾಡಿದ್ದು, ಧಾರವಾಡ ತಾಲೂಕಿನ ಇಟ್ಟಿಗಟ್ಟಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿರುವ ಭೀಕರ ಅಪಘಾತದಲ್ಲಿ 11 ಮಂದಿ ಮೃತಪಟ್ಟಿರುವ ಬಗ್ಗೆ ಸಿಎಂ ಯಡಿಯೂರಪ್ಪ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದೆ.
''ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರಿಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನು ಕೂಡ ಭಾಗಿಯಾಗಿರುತ್ತೇನೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ'' ಎಂದು ಸಿಎಂ ಸಂತಾಪ ವ್ಯಕ್ತಪಡಿಸಿದ್ದಾರೆ.
PublicNext
15/01/2021 04:31 pm