ಬೆಂಗಳೂರು : ಕಲಬುರಗಿ ಜಿಲ್ಲೆಯ ಕಮಲಾಪುರದ ಬಳಿ ಇಂದು ಖಾಸಗಿ ಬಸ್ ವೊಂದು ಹೊತ್ತಿ ಉರಿದ ಪರಿಣಾಮ 7 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಕಲಬುರಗಿ ಹೊರವಲಯದ ಕಮಲಾಪುರ ಬಳಿ ಇಂದು ಭೀಕರ ಅಪಘಾತ ನಡೆದು ಬಸ್‌ನಲ್ಲಿದ್ದ 7 ಪ್ರಯಾಣಿಕರು ಸಜೀವ ದಹನರಾಗಿ, ಹಲವರು ಗಾಯಗೊಂಡಿರುವ ವಿಷಯ ತಿಳಿದು ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
PublicNext
03/06/2022 01:12 pm