ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಚ್‌ಡಿಕೆ ಬೆಂಗಾವಲು ವಾಹನ ಅಪಘಾತ; ಐವರಿಗೆ ಗಾಯ

ತುಮಕೂರು: ಜೆಡಿಎಸ್ ವರಿಷ್ಠ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನವು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಅಪಘಾತಕ್ಕೊಳಗಾಗಿದೆ. ಈ ಅಪಘಾತದಲ್ಲಿ ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಮತ್ತು ಮೊಹಮ್ಮದ್ ಫಾಜಿಲ್ ನಿವಾಸಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದರು. ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳಿ ಐದು ಲಕ್ಷ ರೂ. ಪರಿಹಾರ ವಿತರಣೆ ಮಾಡಿದರು. ಬಳಿಕ ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದಾಗ ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸ್ ಸಿಬ್ಬಂದಿಯಾದ ಮಹೇಶ್, ಮಂಜುನಾಥ್, ಆನಂದ್ ಹರೀಶ್ ಎಂಬವರಿಗೆ ಸಣ್ಣ ಪ್ರಮಾಣದಲ್ಲಿ ಗಾಯಗಳಾಗಿವೆ.

ಸ್ಥಳಕ್ಕೆ ಅಮೃತ್ತೂರು ಪೋಲಿಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ಅಮೃತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

02/08/2022 11:35 am

Cinque Terre

51.88 K

Cinque Terre

3

ಸಂಬಂಧಿತ ಸುದ್ದಿ