ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಪರಿಹಾರ ಮೊತ್ತ ಹೆಚ್ಚಿಸಲು ನಿರಾಣಿ ಮನವಿ

ನವದೆಹಲಿ : ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನಲ್ಲಿ ಕೃಷ್ಣ ನದಿಯ ಪ್ರವಾಹದಿಂದಾಗಿ ಕೃಷಿ ಭೂಮಿಯು ಫಲವತ್ತತೆಯನ್ನು ಕಳೆದುಕೊಂಡಿದೆ. ಹೀಗಾಗಿ ರೈತರಿಗೆ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಸಚಿವ ಮುರುಗೇಶ್ ನಿರಾಣಿ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶೋಭಾ ಕರದ್ಲಾಂಜೆ ಅವರನ್ನು ಭೇಟಿಯಾದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಿರಾಣಿ ಅವರು ತಕ್ಷಣವೇ ಪರಿಹಾರದ ಮೊತ್ತವನ್ನು ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಜಮಖಂಡಿ ತಾಲ್ಲೂಕಿನ ಉಪವಿಭಾಗದಲ್ಲಿ ಕೃಷ್ಣ ನದಿಯಿಂದ ಪದೇ ಪದೇ ಪ್ರವಾಹ ಉಂಟಾಗುವ ಕಾರಣ,ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗುತ್ತದೆ. ಪರಿಣಾಮ ಸರಿಯಾದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟರು. ಒಂದು ಕಡೆ ರೈತರು ಪ್ರವಾಹದಿಂದ ತಮ್ಮ ಬೆಳೆಗಳನ್ನು ನಾಶವಾದರೆ ಮತ್ತೊಂದು ಕಡೆ ಕೃಷಿ ಜಮೀನು ಫಲವತ್ತತೆಯನ್ನು ಕಳೆದುಕೊಂಡಿದ್ದರಿಂದ ಮಣ್ಣು ಸವಕಳಿಗೆ ಬಂದಿದೆ. ಇದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

12/08/2021 07:37 pm

Cinque Terre

111.87 K

Cinque Terre

1

ಸಂಬಂಧಿತ ಸುದ್ದಿ