ಬೆಳಗಾವಿ: ಸುವರ್ಣ ಸೌಧದಲ್ಲಿ ವಿಧಾನ ಮಂಡಲ ಅಧಿವೇಶನ ಶುರುವಾಗಿದೆ. ಇದರ ಬೆನ್ನಲ್ಲೇ ಪ್ರತಿಭಟನೆಗಳ ಮಹಾಪೂರವೇ ಆರಂಭವಾಗಿದೆ. ರಾಜ್ಯ ಸರ್ಕಾರ ಜಾರಿ ಮಾಡಿದ ಭೂಸುಧಾರಣೆ ಕಾಯ್ದೆ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ನೂರಾರು ರೈತರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪ್ರತಿಭಟನೆಯನ್ನು ತಡೆದ ಪೊಲೀಸರು ರೈತರನ್ನು ವಶಕ್ಕೆ ಪಡೆದು ಪ್ರತಿಭಟನಾ ಸ್ಥಳಕ್ಕೆ ಕಳುಹಿಸಿದ್ದಾರೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಿಂದ 12 ಕಿಲೋ ಮೀಟರ್ ಪಾದಯಾತ್ರೆ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸುತ್ತಿದ್ದರು. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇನ್ನು ಪ್ರತಿಭಟನೆ ತಡೆಯಲು ಬಂದ ಪೊಲೀಸರ ಮೇಲೆ ಆಕ್ರೋಶಿತರಾದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
PublicNext
13/12/2021 01:02 pm