ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಬ್ಯಾಂಕಿನ ಮುಂದೆ ರೈತನ ಶವವಿಟ್ಟು ಪ್ರತಿಭಟನೆ!

ವರದಿ- ಈರನಗೌಡ ಪಾಟೀಲ

ಹಾವೇರಿ-ವಾರದ ಹಿಂದೆ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಾಗೇನಹಳ್ಳಿ ಗ್ರಾಮದ ರೈತ ದರ್ಶನ್‌ ನಾಗಪ್ಪ ಮುದ್ದಪ್ಪನವರ ಚಿಕಿತ್ಸೆ ಫಲಕಾರಿಯಾಗದೆ (30) ಮೃತಪಟ್ಟಿದ್ದರು.

ಸಮೀಪದ ಮಾಕನೂರಿನ ಯೂನಿಯನ್‌ ಬ್ಯಾಂಕಿನಿಂದ ಸಾಲ ಪಡೆದಿದ್ದ ದರ್ಶನ್‌ಒಟಿಎಸ್‌ ಯೋಜನೆಯಿಂದ ವಂಚಿತರಾಗಿದ್ದರು. ಈ ಸಂಬಂಧ ರೈತರ ಹೋರಾಟದಲ್ಲೂ ಪಾಲ್ಗೊಂಡಿದ್ದರು. ಮನನೊಂದಿದ್ದ ರೈತ ದರ್ಶನ್‌ ವಾರದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ರೈತ ಮುಖಂಡರು ಆರೋಪ ಮಾಡಿದ್ದಾರೆ.

ದರ್ಶನ್‌ ಸಾವಿಗೆ ಮಾಕನೂರಿನ ಯೂನಿಯನ್‌ ಬ್ಯಾಂಕಿನ ಅಧಿಕಾರಿಗಳು ಕಾರಣ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ರಾತ್ರಿ ವೇಳೆ ಬ್ಯಾಂಕಿನ ಮುಂದೆ ಶವ ಇಟ್ಟು ರೈತರು ಪ್ರತಿಭಟಿನೆ ನಡೆಸಲು ಮುಂದಾಗಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಹಾವೇರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ಮನವೊಲಿಸಲು ಯತ್ನಿಸಿದರು. ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ ನಡೆದು,ಉದ್ವಿಗ್ನ ಪರಿಸ್ಥಿತಿ ಉಂಟಾಗಿಯಿತು. ರೈತ ಮುಖಂಡರಾದ ರವೀಂದ್ರಗೌಡ ಪಾಟೀಲ, ಈರಣ್ಣ ಹಲಗೇರಿ, ಸುರೇಶ ಮಲ್ಲಾಪುರ, ಹರಿಹರಗೌಡ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರ ಮತ್ತು ಮುಖ್ಯಮಂತ್ರಿಗಳ ವಿರುದ್ಧ ರೈತರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಎಚ್ಚೆತ್ತುಕೊಂಡ ಪೊಲೀಸರು ಹೋರಾಟಕ್ಕೆ ಮುಂದಾದ ಮುಖಂಡರನ್ನು ಹಲಗೇರಿ ಠಾಣೆಗೆ ಕರೆದೊಯ್ದಿದ್ದಾರೆ.

Edited By : Manjunath H D
PublicNext

PublicNext

30/07/2022 08:34 am

Cinque Terre

24.73 K

Cinque Terre

0