ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಗರಿಗೆದರಿದೆ. ಇತ್ತ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಚುನಾವಣಾ ತಂತ್ರಕ್ಕೆ ಮುಂದಾಗಿವೆ. ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, 'ಮೊನ್ನೆ ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ. ಇದೇನು ಹೊಸತಲ್ಲ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕಾಲದಿಂದಲೂ ಹೀಗೆ ನಡೆದುಕೊಂಡು ಬಂದಿದೆ. ಕುಮಾರಸ್ವಾಮಿ ಅದನ್ನು ಮುಂದುವರಿಸಿದ್ದಾರೆ ಅಷ್ಟೇ. ನನ್ನ ಪ್ರಕಾರ ಜೆಡಿಎಸ್ ಒಂದು ಪಕ್ಷವೇ ಅಲ್ಲ. ರಾಜಕೀಯದಲ್ಲಿ ಜನ ಸೇವೆ ಮಾಡಬೇಕು. ಅದನ್ನು ಬಿಟ್ಟು ವಿಷ ಕೊಡಿ ಎಂಬುದು ರಾಜಕಾರಣನಾ? ಜನರೇ ಆಶೀರ್ವಾದ ಮಾಡಬೇಕು. ನಾವೇ ಕೇಳಿಕೊಳ್ಳಬಾರದು ಎಂದು ಟಾಂಗ್ ಕೊಟ್ಟರು.
PublicNext
04/10/2020 02:55 pm