ಬೆಂಗಳೂರು: ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಹೆಮ್ಮಾರಿ ಕೊರೊನಾಗೆ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ಇಂದು ಬಲಿಯಾಗಿದ್ದಾರೆ.
ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಬಿ.ನಾರಾಯಣರಾವ್ ಅವರನ್ನು ಕೆಲದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬುಧವಾರ ಅವರ ಪರಿಸ್ಥಿತಿ ಗಂಭಿರವಾಗಿತ್ತು. ಬಹು ಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.
PublicNext
24/09/2020 04:58 pm