ಬೆಂಗಳೂರು : ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಇದಕ್ಕೆ ನಮ್ಮ ವಿರೋಧವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದುವೆ ಒಬ್ಬ ವ್ಯಕ್ತಿಯ ವೈಯಕ್ತಿಕ ಆಯ್ಕೆಯಾಗಿದೆ ಯಾವುದೇ ವ್ಯಕ್ತಿಯಿಂದಲೂ ಯಾರೂ ಸಾಂವಿಧಾನಿಕ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.
ಸರ್ಕಾರ ಇಂತಹ ಕಾನೂನು ಜಾರಿಗೆ ತರಲು ಮುಂದಾಗಿದ್ದೇ ಆದರೆ, ಅದು ಅಸಂವಿಧಾನಿಕವಾಗುತ್ತದೆ ಮತ್ತು ಕಾನೂನು ಪರಿಶೀಲನೆಗೊಳಗಾಗುತ್ತದೆ ಎಂದರು.
ಇದೇ ವೇಳೆ ಶಾಲೆ ಪುನರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ಕೊರೊನಾದಿಂದ ರಾಜ್ಯ ಮುಕ್ತಗೊಳ್ಳುವವರೆಗೂ ರಾಜ್ಯ ಸರ್ಕಾರ ಶಾಲೆಗಳನ್ನು ಪುನರಾರಂಭಿಸಬಾರದು ಎಂಬುದು ನನ್ನ ಅಭಿಪ್ರಾಯವಾಗಿದೆ.
ತರಾತುರಿಯಲ್ಲಿ ಸರ್ಕಾರ ಯಾವುದೇ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ತಿಳಿಸಿದ್ದಾರೆ.
PublicNext
05/11/2020 10:50 am