ಬೆಂಗಳೂರು: ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಕೈಬಿಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ. ಕೊರೊನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು' ಎಂದು ಹೇಳಿದ್ದಾರೆ.
ಪ್ರತಿ ಯೂನಿಟ್‌ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.
PublicNext
05/11/2020 04:10 pm