ಚಿತ್ರದುರ್ಗ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದು ರಾಜಕೀಯ ಪ್ರೇರಿತ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಚ್ಚಿ ಹೋಗಿದ್ದ ಯೋಗೀಶ್ ಗೌಡ ಪ್ರಕರಣವನ್ನು ಮತ್ತೆ ಕೆದಕಲಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಬಿಜೆಪಿ ಹಲವು ಬಾರಿ ಹೀಗೆ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ. ವಿನಯ್ ಕುಲಕರ್ಣಿ ಅವರೊಂದಿಗೆ ಮಾತನಾಡಿದ್ದೇನೆ. ತಪ್ಪು ಮಾಡಿಲ್ಲವೆಂದು ಅವರು ಹೇಳಿದ್ದಾರೆ. ಪ್ರಕರಣ ವಿಚಾರಣೆಯ ಹಂತದಲ್ಲಿರುವುದರಿಂದ ಹೆಚ್ಚು ಹೇಳಲು ಇಷ್ಟಪಡುವುದಿಲ್ಲ' ಎಂದು ಹೇಳಿದರು.
PublicNext
05/11/2020 06:01 pm