ಬೆಂಗಳೂರು: ಈ ವರ್ಷದ ಡಿಸೆಂಬರ್ ನಲ್ಲಿ ನಡೆಯಬೇಕಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆಯನ್ನು 2021ರ ಫೆಬ್ರವರಿಗೆ ಮುಂದೂಡುವ ಸಾಧ್ಯತೆಯಿದೆ. ಡಾ.ಎಂ.ಕೆ ಸುದರ್ಶನ್ ನೇತೃತ್ವದ ತಜ್ಞರ ಸಮಿತಿ ಈ ಕುರಿತಾಗಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದು ಅಪಾಯಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಚುನಾವಣೆ ನಡೆಸುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುವ ಸಾಧ್ಯತೆಯಿದೆ. ಈ ಸಮಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಿದ್ದೇ ಆದರೆ ಕೊರೋನಾ ಸೋಂಕನ್ನು ನಾವೇ ನಮ್ಮ ಮನೆ ಬಾಗಿಲಿಗೆ ತಂದು ಕೂರಿಸಿದಂತಾಗುತ್ತದೆ ಎಂದು ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆ ಸದ್ಯಕ್ಕೆ ಬೇಡ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಮನೆಮನೆಗೆ ಕೋವಿಡ್ ತಲುಪಿಸಿದಂತೆ ಆಗುತ್ತದೆ. ೨೦೨೧ ಫೆಬ್ರವರಿವರೆಗೆ ಚುನಾವಣೆ ಮುಂದೂಡುವುದು ಒಳಿತು ಎಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ ಎಂದು ಸಚಿವ ಕೆ. ಸುಧಾಕರ್ ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸ ಬೇಕಾಗುತ್ತದೆ. ಇದರಿಂದ ಸೋಂಕು ಹರಡುವ ಸಾಧ್ಯತೆಯಿರುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
PublicNext
06/11/2020 02:29 pm