ವಾಷಿಂಗ್ಟನ್- ಅಮೆರಿಕ ಅಧ್ಯಕ್ಷೀಯ ಚುನಾವಣೆ ಇಡೀ ಜಗತ್ತಿನ ಕುತೂಹಲ ಕೆರಳಿಸಿತ್ತು. ಈಗ ಮತ ಎಣಿಕೆ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು ಡೆಮಾಕ್ರೆಟಿಕ್ ಪಕ್ಷದ ಜೋ ಬೈಡನ್ ಶ್ವೇತ ಭವನ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.
ಎಲೆಕ್ಟೋರಲ್ ಮತಗಳ ಎಣಿಕೆಯಲ್ಲೂ ಮುನ್ನಡೆ ಸಾಧಿಸಿದ್ದ ಜೋ ಬೈಡನ್ ಪ್ರಮುಖ ರಾಜ್ಯಗಳಲ್ಲೂ ಮುನ್ನಡೆ ಸಾಧಿಸಿದ್ದಾರೆ. ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗಾಗಲೇ ಸೋಲಿನ ಕಹಿ ಉಂಡಿದ್ದಾರೆ.
ಈ ಬಗ್ಗೆ ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಜೋ ಬೈಡನ್ ನಮ್ಮಿಂದ ಪ್ರಜಾಪ್ರಭುತ್ವವನ್ನು ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಟ್ರಂಪ್ ಅವರು ನನ್ನ ಮೇಲೆ ಮಾಡಿರುವ ಆರೋಪಗಳಿಗೆ ಯಾವುದೇ ಆಧಾರವಿಲ್ಲ. ಸೋಲಿನ ಭೀತಿಯಿಂದ ಟ್ರಂಪ್ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.
PublicNext
06/11/2020 04:06 pm