ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ದೀಪಾವಳಿ ವೇಳೆ ಪಟಾಕಿ ಬ್ಯಾನ್ ನಿರ್ಧಾರ ಸರಿಯಲ್ಲ'

ಬೆಳಗಾವಿ: ದೀಪಾವಳಿಯಲ್ಲಿ ಪಟಾಕಿ ಮಾರಾಟ ಹಾಗೂ ಹೊಡೆಯುವುದನ್ನು ನಿಷೇಧಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾತನಾಡಿದ ಅವರು, 'ದೀಪಾವಳಿ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ವಿಧಿ ವಿಧಾನದಿಂದ ಆಚರಣೆಗಳು ನಡೆಯುವ ಕಾರಣ ಪಟಾಕಿಯನ್ನು ಬ್ಯಾನ್ ಮಾಡಬಾರದು. ವರ್ಷಕ್ಕೊಮ್ಮೆ ನಡೆಯುವ ಗಣೇಶ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಕೇವಲ ಪಟಾಕಿಯಿಂದ ಭಾರೀ ದೊಡ್ಡ ಪ್ರಮಾಣದಲ್ಲಿ ಪರಿಸರ ಮಾಲಿನ್ಯ ಆಗುತ್ತಿದೆ ಎಂಬುದು ಸುಳ್ಳು. ಇವತ್ತು ವಾಹನಗಳಿಂದ ಎಷ್ಟು ಪರಿಸರ ಮಾಲಿನ್ಯ ಆಗುತ್ತಿದೆ ಅದನ್ನು ಯಾರು ತಡೆಯುವ ಪ್ರಯತ್ನ ಮಾಡುತ್ತಿಲ್ಲ. ಪಟಾಕಿ ಬ್ಯಾನ್ ಮಾಡಿ ಕಾನೂನು ಜಾರಿಗೆ ತರಲು ಮುಂದಾಗಿರುವವರು ಒಮ್ಮೆ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡುವುದು ಉತ್ತಮ. ಏಕೆಂದರೆ ಅಭಿವೃದ್ಧಿಯ ಹೆಸರಿನಲ್ಲಿ ನೀವು ಎಷ್ಟು ಪರಿಸರವನ್ನು ನಾಶ ಮಾಡುತ್ತಿದ್ದೀರಿ ಎಂಬುವುದು ಅರಿವಾಗುತ್ತದೆ ಎಂದು ಆಗ್ರಹಿಸಿದ್ದಾರೆ.

Edited By : Vijay Kumar
PublicNext

PublicNext

06/11/2020 07:59 pm

Cinque Terre

113.42 K

Cinque Terre

12

ಸಂಬಂಧಿತ ಸುದ್ದಿ