ಬಿಹಾರ ವಿಧಾನಸಭೆ ಚುನಾವಣಾ ಕೊನೇ ಘಟ್ಟ ತಲುಪಿದೆ. ಇಂದು ಮೂರನೇ ಹಾಗೂ ಕೊನೇ ಹಂತದ ಮತದಾನ ಆರಂಭವಾಗಿದೆ.
15 ಜಿಲ್ಲೆಗಳ 78 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದ್ದು, ಮತದಾರ ಪ್ರಭುಗಳು ಸಾವಿರಾರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.
243 ವಿಧಾನಸಭೆ ಕ್ಷೇತ್ರಗಳಿರೋ ಬಿಹಾರದಲ್ಲಿ ಈಗಾಗಲೇ ಮೊದಲ ಹಂತದಲ್ಲಿ 71 ಕ್ಷೇತ್ರ, 2 ನೇ ಹಂತದಲ್ಲಿ 94 ಕ್ಷೇತ್ರಗಳಲ್ಲಿ ಮತದಾನವಾಗಿದೆ.
ಇದೀಗ ಮೂರನೇ ಹಂತದಲ್ಲಿ 78 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.
ಬಿಜೆಪಿಯ 35 ಅಭ್ಯರ್ಥಿಗಳು, ಜೆಡಿಯು ಪಕ್ಷದ 37 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಆರ್ಜೆಡಿ ಪಕ್ಷದ 46 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಪಕ್ಷದ 25 ಅಭ್ಯರ್ಥಿಗಳು ಸೇರಿ ಒಟ್ಟು 1,204 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಸುಮಾರು 2.34 ಕೋಟಿ ಮತದಾರರು ಅಭ್ಯರ್ಥಿಗಳ ಹಣೆಬರಹ ನಿರ್ಧಾರ ಮಾಡಲಿದ್ದಾರೆ.
ಬೆಳಗ್ಗೆ 7 ಗಂಟೆಗೆ ಮತದಾನ ಶುರುವಾಗಿದ್ದು, ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ ಸಂಜೆ 4 ಗಂಟೆವರೆಗೆ ಮಾತ್ರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
ನವೆಂಬರ್ 10ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ.
PublicNext
07/11/2020 08:13 am