ಚೆನ್ನೈ- ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕೆ ಎಸ್ ಅಳಗಿರಿ ನೇತೃತ್ವದಲ್ಲಿ ಸಸಿಕಾಂತ್ ಸೆಂಥಿಲ್ ಅವರು ಕಾಂಗ್ರೆಸ್ ಸದಸ್ಯರಾಗಲಿದ್ದಾರೆ.
ಈ ಮೂಲಕ ಮುಂಬರುವ ತಮಿಳುನಾಡು ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸಸಿಕಾಂತ್ ಸ್ಪರ್ಧಿಸಲಿದ್ದಾರೆ ಎಂಬ ಸಾಧ್ಯತೆ ದಟ್ಟಗೊಂಡಿದೆ. ಐಎಎಸ್ ಅಧಿಕಾರಿಯಾಗಿದ್ದ ಇವರು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ. 2019ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವರು ತಮ್ಮ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು.
PublicNext
09/11/2020 07:59 am