ಬೆಂಗಳೂರು: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ, ರಾಜೀನಾಮೆ ನೀಡಿದ್ದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಇಂದು ಚೆನ್ನೈನಲ್ಲಿ ಕಾಂಗ್ರೆಸ್ ಸೇರಿದ್ದಾರೆ.
ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರಿದ್ದಾರೆ. ತಮಿಳುನಾಡು ಮೂಲದವರಾದ 41 ವರ್ಷದ ಸಸಿಕಾಂತ್ ಸೆಂಥಿಲ್ 2009ರ ಕರ್ನಾಟಕ-ಕೇಡರ್ ಐಎಎಸ್ ಅಧಿಕಾರಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಕಳೆದ ವರ್ಷದ ಸೆಪ್ಟೆಂಬರ್ 6ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
PublicNext
09/11/2020 02:48 pm