ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಧಾನ ಸಭಾ ಉಪಚುನಾವಣೆಯ ಫಲಿತಾಂಶ ಇಂದು

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಈಗಾಗಲೇ ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಟ್ರಾಂಗ್ ರೂಂ ತೆರೆದು ಮತಯಂತ್ರಗಳನ್ನು ಎಣಿಕೆಗೆ ಸಜ್ಜುಗೊಳಿಸುತ್ತಿದ್ದಾರೆ. ಶಿರಾ ಹಾಗೂ ಬೆಂಗಳೂರಿನ ಆರ್ ಆರ್ ನಗರ ಕ್ಷೇತ್ರಗಳಿಗೆ ನವೆಂಬರ್ 3ರಂದು ಮತದಾನ ನಡೆದಿತ್ತು‌. ಅದರ ಫಲಿತಾಂಶ ಇಂದು ಪ್ರಕಟವಾಗಲಿದೆ.

ಇಂದು ಫಲಿತಾಂಶ ಹಿನ್ನಲೆ ಆರ್ ಆರ್ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬೆಳ್ಳಂಬೆಳಿಗ್ಗೆ ದೇವಸ್ಥಾನ ಸುತ್ತುತ್ತಿದ್ದಾರೆ. ಎಲ್ಲ ಅಭ್ಯರ್ಥಿಗಳಲ್ಲೂ ಸೋಲು-ಗೆಲುವಿನ ಅಳುಕು ಕಾಡುತ್ತಿದೆ. ಮದ್ಯಾಹ್ನದ ಹೊತ್ತಿಗೆ ಸ್ಪಷ್ಟ ಫಲಿತಾಂಶ ಪ್ರಕಟವಾಗಲಿದೆ.

Edited By : Nagaraj Tulugeri
PublicNext

PublicNext

10/11/2020 08:35 am

Cinque Terre

65.73 K

Cinque Terre

1

ಸಂಬಂಧಿತ ಸುದ್ದಿ