ತುಮಕೂರು: ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ. ರಾಜೇಶ್ ಗೌಡ 63, 294 ಮತಗಳನ್ನು ಪಡೆದು ಜಯ ಸಾಧಿಸಿದ್ದಾರೆ. ಇವರ ಎದುರಾಳಿ ಅಭ್ಯರ್ಥಿಯಾಗಿದ್ದ ಕಾಂಗ್ರೆಸ್ ಪಕ್ಷದ ಟಿ ಬಿ ಜಯಚಂದ್ರ 52,914 ಮತಗಳನ್ನ ಪಡೆದಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ಅಮ್ಮಾಜಮ್ಮ 29,166 ಮತಗಳನ್ನು ಪಡೆದಿದ್ದಾರೆ.
ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಕ್ಷೇತ್ರದಲ್ಲಿ ಸಾಕಷ್ಟು ಪ್ರಚಾರ ನಡೆಸಿದ್ದರು. ಒಟ್ನಲ್ಲಿ ಉಪಚುನಾವಣೆ ನಡೆದ ಎರಡೂ ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದರಿಂದ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ
PublicNext
10/11/2020 02:44 pm