ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಸೋಲಿನ ಹೊಣೆ ನಾನೇ ಹೊರುವೆ’

ಬೆಂಗಳೂರು: ಉಪ ಚುನಾವಣೆ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಸೋಲಿನ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 'ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾರರು ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ. ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ. ಆರ್‌ಆರ್‌ ನಗರದಲ್ಲಿ ಇಷ್ಟು ಅಂತರದ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಇನ್ನು ಶಿರಾದಲ್ಲಿನ ಲೆಕ್ಕಾಚಾರ ಪೂರ್ಣವಾಗಿ ತಪ್ಪಾಗಿ ಹೋಗಿದ್ದು, ಅಲ್ಲಿನ ಫಲಿತಾಂಶ ಅಚ್ಚರಿ ತಂದಿದೆ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ನಂತರ ನಡೆದ ಮೊದಲ ಚುನಾವಣೆಯಲ್ಲೇ ಸೋಲಾಗಿರುವುದು ನೋವು ತಂದಿದೆ. ಆರ್‌ಆರ್‌ ನಗರದಲ್ಲಿ ಕುಸುಮಾ ಅವರು ಉತ್ತಮ ಸ್ಪರ್ಧೆ ನೀಡಿದ್ದಾರೆ. ನಮಗೆ ಸಿಕ್ಕಿರುವ ಮತ ಕೇವಲ ನಮ್ಮ ಪಕ್ಷದ ಮತ ಮಾತ್ರವಲ್ಲ. ಬೇರೆ ಪಕ್ಷದ ಮತದಾರರು ಮತ ಹಾಕಿದ್ದಾರೆ. ಅವರ ತೀರ್ಪನ್ನು ನಾವು ಸ್ವೀಕರಿಸುತ್ತೇವೆ ಎಂದು ಹೇಳಿದರು.

Edited By : Vijay Kumar
PublicNext

PublicNext

10/11/2020 07:50 pm

Cinque Terre

52.75 K

Cinque Terre

7

ಸಂಬಂಧಿತ ಸುದ್ದಿ