ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

11 ರಾಜ್ಯಗಳ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ: ನೆಲ ಕಚ್ಚಿದ ಕಾಂಗ್ರೆಸ್, ಬಿಎಸ್‌ಪಿ, ಎಸ್‌ಪಿ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ ಜೊತೆಗೆ ದೇಶದ 11 ರಾಜ್ಯಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಬಾರಿಸಿದ್ದು, ಕಾಂಗ್ರೆಸ್‌, ಬಹುಜನ ಸಮಾಜ ಪಕ್ಷ ಹಾಗೂ ಸಮಾಜವಾದಿ ಪಕ್ಷಗಳು ಮುಖಭಂಗ ಅನುಭವಿಸಿವೆ.

ಒಟ್ಟು 58 ಉಪ ಚುನಾವಣಾ ಕ್ಷೇತ್ರಗಳಲ್ಲಿ ಬಿಜೆಪಿ 24 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದು, 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇತ್ತ ಮಧ್ಯಪ್ರದೇಶದ 28 ಕ್ಷೇತ್ರಗಳ ಉಪಚುನಾವಣೆ ನಡೆಯಲ್ಲಿ 14 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದರೆ, ಕಾಂಗ್ರೆಸ್ 6 ಕ್ಷೇತ್ರಗಳಲ್ಲಿ ಹಾಗೂ ಬಿಎಸ್‌ಪಿ ಒಂದು ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಉತ್ತರ ಪ್ರದೇಶದಲ್ಲಿಯೂ ಕೇಸರಿ ಅಲೆ ಎಬ್ಬಿಸಿರುವ ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಎಸ್‌ಪಿ ಒಂದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಗುಜರಾತ್‌ 8 ಕ್ಷೇತ್ರಗಳ ಪೈಕಿ ಮೂರರಲ್ಲಿ ಗೆಲುವು ಸಾಧಿಸಿದರೆ, ಐದು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Edited By : Vijay Kumar
PublicNext

PublicNext

10/11/2020 08:55 pm

Cinque Terre

96.39 K

Cinque Terre

7

ಸಂಬಂಧಿತ ಸುದ್ದಿ