ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಲೆ‌ಕೆಳಗಾದ ಸಮೀಕ್ಷೆ: ಬಿಹಾರದಲ್ಲಿ ಮತ್ತೆ ಸಿಎಂ ಆದ ನಿತೀಶ್

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿತು. ಸಾಮಾನ್ಯವಾಗಿ ಬೇಗನೆ ಪ್ರಕಟವಾಗುತ್ತಿದ್ದ ಫಲಿತಾಂಶ ಈ ಸಲಾ ಕುತೂಹಲಕಾರಿ ತಿರುವು ಕಂಡು ಕೊನೆ ಕ್ಷಣದಲ್ಲಿ ಎನ್‍ಡಿಎ ಮೈತ್ರಿಕೂಟ ಭರ್ಜರಿಯಾಗಿ ಗೆಲುವು ಕಂಡಿದೆ.

ಈ ಮೂಲಕ ಎಲ್ಲ ಸಮೀಕ್ಷೆಗಳನ್ನು ಎನ್ ಡಿ ಎ ತಲೆಕೆಳಗಾಗಿಸಿದೆ. ನಿನ್ನೆ ಮಂಗಳವಾರ ಬೆಳಗ್ಗಿನಿಂದ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾರೀ ಕುತೂಹಲಕ್ಕೆ ಕಾರಣವಾಗಿ ಕೊನೆಗೆ ಮಧ್ಯರಾತ್ರಿ 2 ಗಂಟೆ ವೇಳೆಗೆ ಎನ್‍ಡಿಎ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮತಎಣಿಕೆ ಆರಂಭವಾದಾಗಿನಿಂದಲೂ ತೂಗುಯ್ಯಾಲೆಯಲ್ಲಿ ಕುಳಿತಿದ್ದ ವಿಜಯಲಕ್ಷ್ಮೀ ಕೊನೆಗೂ ಎನ್‍ಡಿಎ ಕಡೆ ಒಲಿದಿದ್ದಾಳೆ.

ಬಿಹಾರ ರಾಜ್ಯದ ಒಟ್ಟು 243 ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‍ಡಿಎ ಬಹುಮತಕ್ಕೆ ಬೇಕಿದ್ದ 122 ಸ್ಥಾನಗಳನ್ನು ದಾಟಿ 125 ಕ್ಷೇತ್ರಗಳಲ್ಲಿ ಸ್ಪಷ್ಟ ಬಹುಮತ ಬಾಚಿಕೊಂಡಿದೆ. ಮಹಾಘಟಬಂಧನ್ 110 ಸ್ಥಾನಗಳಲ್ಲಿ ಗೆದ್ದರೆ, ಇತರ ಅಭ್ಯರ್ಥಿಗಳು 8 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಇನ್ನು ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿಯ ಏಕಾಂಗಿ ಹೋರಾಟದ ಹೊರತಾಗಿಯೂ ಮಹಾಘಟಬಂಧನ್ ಅಧಿಕಾರದಿಂದ ದೂರು ಉಳಿದಿದೆ.

ಬಿಹಾರದಲ್ಲಿ ಮತದಾರರು ಮೋದಿ-ನಿತೀಶ್ ಜೋಡಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಬಿಜೆಪಿ 74 ಕ್ಷೇತ್ರಗಳಲ್ಲಿ ವಿಜಯದ ನಗೆ ಬೀರುವ ಮೂಲಕ ಎನ್‍ಡಿಎ ಮೈತ್ರಿಕೂಟದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ, ಲೋಕ ಜನಶಕ್ತಿ ಪಾರ್ಟಿಯ ಚಿರಾಗ್ ಪಾಸ್ವಾನ್ ನೀಡಿದ ಏಟಿನಿಂದಾಗಿ ಮೂರನೇ ಸ್ಥಾನಕ್ಕೆ ಕುಸಿದಿದ್ದು 43 ಕ್ಷೇತ್ರಗಳಲ್ಲಿ ಮಾತ್ರ ಜಯ ಸಾಧಿಸಿದೆ. ತೇಜಸ್ವಿ ಯಾದವ್ ನೇತೃತ್ವದ ಆರ್‍ಜೆಡಿ 75 ಕ್ಷೇತ್ರದಲ್ಲಿ ಗೆದ್ದು ಬಿಹಾರದ ಅತಿದೊಡ್ಡ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ.

Edited By : Nagaraj Tulugeri
PublicNext

PublicNext

11/11/2020 07:44 am

Cinque Terre

81.3 K

Cinque Terre

7

ಸಂಬಂಧಿತ ಸುದ್ದಿ