ಬೆಂಗಳೂರು-ಮೋದಿ ಹಾಗೂ ಯಡಿಯೂರಪ್ಪ ಅವರ ಆಡಳಿತದ ಶಿಸ್ತುಬದ್ಧತೆ ನೋಡಿ ಜನ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಎಸ್ ಎಂ ಕೃಷ್ಣ ಹೇಳಿದ್ದಾರೆ.
ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಇಬ್ಬರೂ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಎಸ್ ಎಂ ಕೃಷ್ಣ ಆ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಶಿರಾ ಕ್ಷೇತ್ರದಿಂದ ರಾಜೇಶ್ ಗೌಡ ಹಾಗೂ ಆರ್ ಆರ್ ನಗರದಿಂದ ಮುನಿರತ್ನ ಅವರು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಇದು ಶಿಸ್ತುಬದ್ಧ ಆಡಳಿತಕ್ಕೆ ಸಿಕ್ಕ ಪ್ರತಿಫಲ ಎಂದು ಎಸ್ ಎಂ ಕೃಷ್ಣ ತಮ್ಮ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ .
PublicNext
11/11/2020 08:05 am