ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪಚುನಾವಣೆ ಗೆದ್ದ ಅಭ್ಯರ್ಥಿಗಳಿಗೆ ಮೋದಿ ಅಭಿನಂದನೆ

ನವದೆಹಲಿ: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ಕರ್ನಾಟಕದ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನಃ ದೃಢೀಕರಿಸುತ್ತದೆ. ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

11/11/2020 11:59 am

Cinque Terre

42.2 K

Cinque Terre

2

ಸಂಬಂಧಿತ ಸುದ್ದಿ