ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಸದೃಢ ಭಾರತ ನಿರ್ಮಾಣಕ್ಕಾಗಿ ಇಡೀ ದೇಶದಲ್ಲಿ ಅಭೂತಪೂರ್ವ ಐಕ್ಯತೆ'

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಗೆಲುವನ್ನು ಸಂಭ್ರಮಿಸಲಾಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮತದಾರರಿಗೆ ಧನ್ಯವಾದ ತಿಳಿಸಿದರು.

ಈ ವೇಳೆ ಮಾತನಾಡಿದ ಅವರು, ಅಭಿವೃದ್ಧಿ, ಸದೃಢ ಭಾರತ ನಿರ್ಮಾಣಕ್ಕಾಗಿ ಇಡೀ ದೇಶದಲ್ಲಿ ಅಭೂತಪೂರ್ವವಾದ ಐಕ್ಯತೆ ಮನೆ ಮಾಡಿದೆ. ಬಿಹಾರದ ಜನತೆ ಅಭಿವೃದ್ಧಿಗಾಗಿ ಮತ ನೀಡಿದ್ದು, ಅವರನ್ನು ಅಭಿನಂದಿಸುತ್ತೇನೆ. ಕೇವಲ ಬಿಹಾರ ಮಾತ್ರವಲ್ಲದೇ ಇಡೀ ಭಾರತದಲ್ಲಿ ಅಭಿವೃದ್ಧಿಗಾಗಿ ಈ ಐಕ್ಯತೆಯನ್ನು ನಾವು ಕಾಣಬಹುದಾಗಿದೆ' ಎಂದು ಮೋದಿ ಹೇಳಿದರು.

ಕೇವಲ ಬಿಹಾರ ವಿಧಾನಸಭೆ ಮಾತ್ರವಲ್ಲದೇ ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳಲ್ಲಿ ನಡೆದ ಉಪ ಚುನಾವಣೆಗಳಲ್ಲೂ ಬಿಜೆಪಿ ಭರ್ಜರಿ ವಿಜಯ ಸಾಧಿಸಿದೆ. ಇದು ದೇಶದ ಜನತೆ ಬಿಜೆಪಿ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿ ಎಂದರು.

Edited By : Vijay Kumar
PublicNext

PublicNext

11/11/2020 09:47 pm

Cinque Terre

99.76 K

Cinque Terre

9

ಸಂಬಂಧಿತ ಸುದ್ದಿ