ಚಿಕ್ಕಮಗಳೂರು: ಮೊದಲು ರಕ್ತರಹಿತವಾದ ಬಕ್ರೀದ್ ಆಚರಿಸೋಣ. ನಿಶ್ಶಬ್ದವಾದ ಶುಕ್ರವಾರ ಆಚರಣೆ ಮಾಡೋಣ. ಆಮೇಲೆ ಶಬ್ದವಿಲ್ಲದ, ಪಟಾಕಿ ಇಲ್ಲದ ದೀಪಾವಳಿ ಆಚರಿಸೋಣ ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಸರ್ಕಾರದ ಪಟಾಕಿ ನಿಷೇಧ ಹೇರಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಡಿಸಿ ಕಚೇರಿ ಬಳಿ ಮಾತನಾಡಿದ ಅವರು, ಪಟಾಕಿ ನಿಷೇಧದ ಬಗ್ಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಸಿರು ಪಟಾಕಿ ಎಂದರೆ ಯಾವುದು? ಎಲೆ ಸುತ್ತಬೇಕಾ ಅಥವಾ ಪೇಪರ್ ಹರಿದು ಹಸಿರು ಬಣ್ಣದ ಪೇಪರ್ ಸುತ್ತಬೇಕಾ ಎಂದು ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಯಡಿಯೂರಪ್ಪ ಪೂರ್ಣಾವಧಿ ಸಿಎಂ ಎಂದು ಯಾವಾಗಲೂ ಹೇಳುತ್ತಿರುತ್ತೇನೆ. ಹಿಂದೂಗಳ ಆಚರಣೆ ಬಗ್ಗೆ ಹೀಗೆ ಮಾಡಿದರೆ ಅವರು ಮೂರು ತಿಂಗಳೂ ಇರುವುದಿಲ್ಲ. ಉಂಡುಂಡು ಮಲಗೋದು, ದಿನಕ್ಕೊಂದು ಕಾನೂನು ತರೋದಷ್ಟೆ ಸರ್ಕಾರದ ಸಾಧನೆಯಾಗಿದೆ. ಯೋಗಿ ಸರ್ಕಾರವನ್ನು ನೋಡಿ ಕಲಿಯರಿ. ಅವರು 6 ಲಕ್ಷ ದೀಪ ಹಚ್ಚುತ್ತಿದ್ದಾರೆ ಎಂದು ಬಿಎಸ್‍ವೈ ವಿರುದ್ಧ ಕಿಡಿಕಾರಿದರು. ದತ್ತಮಾಲಾ ಅಭಿಯಾನಕ್ಕೆ ಕಡಿಮೆ ಜನ ಸೇರಿಸಿ ಎಂದು ಹೇಳಿರುವ ಜಿಲ್ಲಾಡಳಿತದ ವಿರುದ್ಧವೂ ರಿಷಿಕುಮಾರ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.
PublicNext
12/11/2020 07:43 am