ನವದೆಹಲಿ: ಲಾಕ್ಡೌನ್ನಿಂದ ಉದ್ಯೋಗ ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಗುಡ್‌ನ್ಯೂಸ್ ನೀಡಿದೆ.
ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕಳೆದ ಮಾರ್ಚ್ ತಿಂಗಳಿನಿಂದ ಸೆಪ್ಟೆಂಬರ್ವರೆಗೆ ಉದ್ಯೋಗ ಕಳೆದುಕೊಂಡ, ತಿಂಗಳಿಗೆ 15 ಸಾವಿರ ರೂ.ಗೂ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೂ ಇಪಿಎಫ್ ಸೌಲಭ್ಯ ಸಿಗಲಿದೆ. ಇಪಿಎಫ್ಓನಲ್ಲಿ ರಿಜಿಸ್ಟರ್ ಆಗಿರುವ ಕಂಪನಿಯ ಹೊಸ ಉದ್ಯೋಗಿಗಳಿಗೆ ಪಿಎಫ್ ಸಬ್ಸಿಡಿ ನೀಡಲಾಗುವುದು ಎಂದು ಘೋಷಿಸಿದ್ದಾರೆ.
'1,000 ಅಥವಾ ಅದಕ್ಕಿಂತ ಕಡಿಮೆ ನೌಕರರಿರುವ ಕಂಪನಿಗಳಿಗೆ ಮುಂದಿನ 2 ವರ್ಷಗಳ ಕಾಲ ಪಿಎಫ್ ಸಬ್ಸಿಡಿ ಸಿಗಲಿದೆ. ಶೇ. 12ರಷ್ಟು ಕಂಪನಿ ಮತ್ತು ಶೇ. 12ರಷ್ಟು ಉದ್ಯೋಗಿಯ ಪಿಎಫ್ ಮೊತ್ತವನ್ನು ಸರ್ಕಾರವೇ ಭರಿಸಲಿದೆ' ಎಂದು ತಿಳಿಸಿದ್ದಾರೆ.
PublicNext
12/11/2020 03:52 pm