ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡೆನ್ 2021ರ ಜನವರಿ 20ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮುಖ್ಯ ಅತಿಥಿಯಾಗಿ ಬೈಡೆನ್ ಆಹ್ವಾನಿಸಿದ್ದಾರೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಸುದ್ದಿಯನ್ನು ಮನಮೋಹನ್ ಸಿಂಗ್ ಅವರ ಕಚೇರಿಯು ಅಲ್ಲಗಳೆದಿದ್ದು, ‘ಅಮೆರಿಕದ ಅಧ್ಯಕ್ಷರ ಕಚೇರಿಯಿಂದ ಇಂತಹ ಯಾವುದೇ ಆಹ್ವಾನ ಇದುವರೆಗೆ ಬಂದಿಲ್ಲ. ಅಷ್ಟೇ ಅಲ್ಲದೆ ಅಮೆರಿಕ ಚುನಾವಣಾ ಫಲಿತಾಂಶ ಇನ್ನೂ ಅಧಿಕೃತವಾಗಿ ಘೋಷಣೆಯಾಗಿಲ್ಲ’ ಎಂದು ಸ್ಪಷ್ಟನೆ ನೀಡಿದೆ.
PublicNext
12/11/2020 04:16 pm