ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಮಾಲ್ ವರ್ಕ್‌ಔಟ್ ಆಗಿದೆ.
ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಪ್ರಚಾರ ಮಾಡಿದ ಕ್ಷೇತ್ರಗಳ ಪೈಕಿ ಶೇ.67 ಕಡೆ ಎನ್‌ಡಿಎ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ. ಅವರು ಮೂರು ಹಂತದ ಚುನಾವಣೆಯಲ್ಲಿ 18 ಕ್ಷೇತ್ರಗಳಲ್ಲಿ ಮತ ಯಾಚನೆ ಮಾಡಿದ್ದರು. ಈ ಪೈಕಿ 12 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಉಳಿದ 6 ಕ್ಷೇತ್ರಗಳ ಪೈಕಿ 4ಯಲ್ಲಿ ಸಿಪಿಐ (ಎಂಎಲ್) ಹಾಗೂ ಎರಡರಲ್ಲಿ ಆರ್‌ಜೆಡಿ ಗೆದ್ದು ಬೀಗಿವೆ.
PublicNext
12/11/2020 04:39 pm