ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ ನೂತನ ಐಟಿ-ಬಿಟಿ ನೀತಿ ಬಿಡುಗಡೆ

ಬೆಂಗಳೂರು: ಬೆಂಗಳೂರು ನಗರ ಹೊರತುಪಡಿಸಿ ಎರಡನೇ ಹಂತದ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಶಕ್ತಿಶಾಲಿಯಾಗಿ ವಿಸ್ತರಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಟ್ಟಿದೆ. ಅದಕ್ಕೆ ಪೂರಕವಾದ ನೂತನ ಐಟಿ-ಬಿಟಿ ನೀತಿ ಬಿಡುಗಡೆಯನ್ನು ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಬಿಡುಗಡೆಗೊಳಿಸಿದ್ದಾರೆ.

ನಗರದಲ್ಲಿ ಆಯೋಜಿಸುತ್ತಿರುವ ಟೆಕ್ ಸಮಿಟ್ 2020 ಹಿನ್ನೆಲೆಯಲ್ಲಿ ನೂತನ ಐಟಿ-ಬಿಟಿ ನೀತಿಯನ್ನು ರಾಜ್ಯ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ. ಈ ವೇಳೆ ಮಾತನಾಡಿದ ಅಶ್ವತ್ಥನಾರಾಯಣ ಅವರು, 'ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಐಟಿ-ಬಿಟಿ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ಆದ್ಯತೆ ನೀಡಿದ್ದು, ನೂತನ ನೀತಿ ಇದಕ್ಕೆ ಪೂರಕವಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯ ವಿವಿಧ ನಗರಗಳಲ್ಲಿ ಐಟಿ ಕಂಪನಿಗಳ ಸ್ಥಾಪನೆ, ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು, ಮಾನವ ಸಂಪನ್ಮೂಲ ಹಾಗೂ ಉದ್ಯೋಗ ಸೃಷ್ಟಿ ಸೇರಿ ಹಲವಾರು ಅಂಶಗಳನ್ನು ಐಟಿ ನೀತಿ ಒಳಗೊಂಡಿದ್ದು, ಇದರಿಂದ ನಮ್ಮ ಮಾಹಿತಿ ತಂತ್ರಜ್ಞಾನ ಕ್ಷೇತ್ರವು ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ತಿಳಿಸಿದರು.

ಈಗಾಗಲೇ ಎರಡನೇ ಹಂತದ ನಗರಗಳಲ್ಲಿ ಐಟಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಪ್ರಯತ್ನಗಳು ನಡೆದಿವೆ. ಮುಖ್ಯವಾಗಿ ಇನ್ಫೋಸಿಸ್‌ ಕಂಪನಿ ಮೈಸೂರು, ಹುಬ್ಬಳ್ಳಿ ಮತ್ತು ಮಂಗಳೂರು ನಗರಗಳಿಗೆ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸುವ ದೊಡ್ಡ ಪ್ರಯತ್ನ ಮಾಡಿತು. ಇದೇ ರೀತಿಯ ಪ್ರಯತ್ನಗಳು ಮುಂದಿನ ದಿನಗಳಲ್ಲಿ ರಚನಾತ್ಮಕ ವೇಗ ಪಡೆಯಲಿವೆ ಎಂದು ಹೇಳಿದರು.

Edited By : Vijay Kumar
PublicNext

PublicNext

12/11/2020 06:50 pm

Cinque Terre

91.94 K

Cinque Terre

3

ಸಂಬಂಧಿತ ಸುದ್ದಿ