ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನ.16ರಂದು ನಿತೀಶ್​ ಕುಮಾರ್​ ಪ್ರಮಾಣವಚನ

ಪಾಟ್ನಾ: ಎನ್​ಡಿಎ ಸರ್ಕಾರದ ಬೆಂಬಲದೊಂದಿಗೆ ನಿತೀಶ್​ ಕುಮಾರ್​ ಮತ್ತೊಮ್ಮೆ ಬಿಹಾರದ ಮುಖ್ಯಮಂತ್ರಿ ಪಟ್ಟ ಅಲಂಕರಿಸುತ್ತಿದ್ದಾರೆ.

ಆರನೇ ಬಾರಿ ಮುಖ್ಯಮಂತ್ರಿ ಆಗುತ್ತಿರುವ ನಿತೀಶ್ ಕುಮಾರ್‌ ಅವರು ರಾಜ್ಯದಲ್ಲಿ ದೀರ್ಘಾವಧಿ ಕಾಲ ಮುಖ್ಯಮಂತ್ರಿಯಾದ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. ಬಿಹಾರ ಚುನಾವಣೆಯಲ್ಲಿ ಜೆಡಿಯುಗಿಂತ ಬಿಜೆಪಿ ಮುನ್ನಡೆ ಸಾಧಿಸಿದ್ದರೂ, ಚುನಾವಣಾ ಪೂರ್ವದಲ್ಲಿ ಮಾಡಿಕೊಂಡ ಮೈತ್ರಿಯಂತೆ ಎನ್​ಡಿಎ ನಿತೀಶ್​ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ಅಂದರೆ ನ.16ರ ಸೋಮವಾರದಂದು ನಿತೀಶ್ ಕುಮಾರ್‌ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Edited By : Vijay Kumar
PublicNext

PublicNext

12/11/2020 10:54 pm

Cinque Terre

60.43 K

Cinque Terre

2

ಸಂಬಂಧಿತ ಸುದ್ದಿ