ಪಾಟ್ನಾ: ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಯು-ಟರ್ನ್ ಹೊಡೆದಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರ ವೇಳೆ ನಿತೀಶ್ ಕುಮಾರ್, ಇದು ನನ್ನ ಕೊನೆಯ ಚುನಾವಣೆ ಎಂದು ಘೋಷಿಸಿದ್ದರು. ಈಗಾಗಲೇ ಚುನಾವಣೆ ಮುಗಿದು ಫಲಿತಾಂಶವೂ ಹೊರಬಿದ್ದಿದೆ. ಎನ್‌ಡಿಎ ಮೈತ್ರಿ ಗೆಲುವು ದಾಖಲಿಸಿದ್ದು, ಮತ್ತೆ ನಿತೀಶ್ ಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎನ್ನಲಾಗುತ್ತಿದೆ. ಆದರೆ ಈಗ ನಿತೀಶ್ ಕುಮಾರ್, 'ನಾನು ರಾಜಕೀಯ ನಿವೃತ್ತಿ ಬಗ್ಗೆ ಮಾತೇ ಆಡಿಲ್ಲ' ಎಂದು ಹೇಳಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿದ ನಿತೀಶ್ ಕುಮಾರ್, 'ನಾನು ಚುನಾವಣಾ ಪ್ರಚಾರದಲ್ಲಿ ಮಾಡಿದ ಭಾಷಣವನ್ನು ಮಾಧ್ಯಮದವರು ತಪ್ಪಾಗಿ ಗ್ರಹಿಸಿದ್ದಾರೆ. ಒಳ್ಳೆಯದಾಗಿ ಮುಗಿದರೆ ಎಲ್ಲವೂ ಒಳ್ಳೆಯದೇ ಎಂದು ನಾನು ಹೇಳಿದ್ದೆ. ಆದರೆ ಅದನ್ನು ನಾನು ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ ಅಂತ ಬಿಂಬಿಸಲಾಗಿದೆ. ರಾಜ್ಯದ ಜನತೆ ಬಯಸುವುದಾದರೆ ಇದೇ ಹುಮ್ಮಸ್ಸಿನೊಂದಿಗೆ ಕೆಲಸ ಮುಂದುವರಿಸುತ್ತೇನೆ' ಎಂದು ತಿಳಿಸಿದ್ದಾರೆ.
PublicNext
13/11/2020 04:23 pm