ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ವಿರುದ್ಧ ಪ್ರಧಾನಿ ಮೋದಿಗೆ ಪತ್ರ- ಪಕ್ಷದಿಂದ ಮಾಜಿ ಸಚಿವನಿಗೆ ಕೊಕ್ ನೀಡಿದ ಬಿಜೆಪಿ

ಡೆಹ್ರಾಡೂನ್​: ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಮಾಜಿ ಸಚಿವನನ್ನು ಪಕ್ಷದಿಂದ ರಾಜ್ಯ ಬಿಜೆಪಿಯು ವಜಾಗೊಳಿಸಿದೆ.

ರಾಜ್ಯದಲ್ಲಿ ಪಕ್ಷದ ಮೌಲ್ಯವನ್ನು ಕಡಿಮೆ ಮಾಡುತ್ತಿದ್ದಾರೆ. ಇದರ ಬಗ್ಗೆ ನೀವು ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿ ಉತ್ತರಾಖಂಡದ ಮಾಜಿ ಸಚಿವ, ಹಾಲಿ ಶಾಸಕ ಲಖಿ ರಾಮ್​ ಜೋಶಿ ಅವರು ನವೆಂಬರ್​ 11ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಅಷ್ಟೇ ಅಲ್ಲದೆ ಸಿಎಂ ತ್ರಿವೇಂದ್ರ ಸಿಂಗ್​ ರಾವತ್​ ಅವರು ಕಪ್ಪು ಹಣ ಸಂಗ್ರಹದಲ್ಲಿ ನಿರತರಾಗಿದ್ದಾರೆ. ಅವರ ಮೇಲೆ ಸಿಬಿಐ ತನಿಖೆಗೆ ಹೈಕೋರ್ಟ್​ ಆದೇಶಿಸಿದೆ. ಇದರಿಂದಾಗಿ ರಾಜ್ಯದ ಜನರು ಪಕ್ಷದ ಮೇಲಿದ್ದ ನಂಬಿಕೆ ಕಳೆದುಕೊಳ್ಳುವಂತಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

ಲಖಿ ರಾಮ್​ ಜೋಶಿ ಅವರಿಗೆ ಪಕ್ಷದಿಂದ ಕೊಕ್‌ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಂಸಿಧರ್​ ಭಗತ್, ಇದು ರಾಜ್ಯದ ಆಂತರಿಕ ವಿಚಾರವಾಗಿದೆ. ಈ ಬಗ್ಗೆ ಅವರು ಮೊದಲು ರಾಜ್ಯದ ನಾಯಕರ ಜತೆ ಚರ್ಚಿಸಬೇಕಿತ್ತು. ಅದರ ಬದಲಾಗಿ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪಕ್ಷದ ಶಿಸ್ತನ್ನು ಕಾಪಾಡಿಕೊಳ್ಳದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ವಜಾಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

13/11/2020 10:53 pm

Cinque Terre

70.12 K

Cinque Terre

2

ಸಂಬಂಧಿತ ಸುದ್ದಿ