ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2023ರ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋದೇ ನಮ್ಮ ಗುರಿ

ಬೆಂಗಳೂರು: ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ರಾಮನಗರ ಜಿಲ್ಲೆ ಆಶ್ರಯ ನೀಡಿದೆ. ಹೀಗಾಗಿ ಅಲ್ಲಿಂದಲೇ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ. ರಾಮನಗರ ಜಿಲ್ಲೆಯಿಂದಲೇ ಜೆಡಿಎಸ್ ಪಕ್ಷ ಸಂಘಟನೆಗೆ ಚಾಲನೆ ಸಿಗಲಿದೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

2023ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದ ನಮ್ಮ ಮುಂದಿನ ಗುರಿಯಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡು ಯುವ ಕಾರ್ಯಕರ್ತರನ್ನು ಸಂಘಟಿಸುತ್ತೇನೆ. ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಜನ್ಮ ನೀಡಿದ ರಾಮನಗರದಿಂದಲೇ ಈ ಕೆಲಸ ಶುರು ಮಾಡುತ್ತೇನೆ ರಾಮನಗರ ಜಿಲ್ಲೆ ನಂತರ ಬೇರೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುವ ವಿವರವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇನೆ ಎಂದಿದ್ದಾರೆ.

ರಾಮನಗರ ಅಥವಾ ಚನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಉದ್ದೇಶ ಇಲ್ಲ. ಆದರೆ ಈಗಲೇ ಈ ಬಗ್ಗೆ ಏನನ್ನೂ ಹೇಳಲಾರೆ. ರಾಮನಗರ ಕ್ಷೇತ್ರದ ಪ್ರವಾಸದ ವೇಳೆಯಲ್ಲಿ ಜನರ ಅಹವಾಲು ಆಲಿಸಿ, ಕ್ಷೇತ್ರದ ಸಮಸ್ಯೆಗಳನ್ನು ಇಲ್ಲಿನ ಶಾಸಕರಾದ ಅನಿತಾ ಕುಮಾರಸ್ವಾಮಿ ಗಮನಕ್ಕೆ ತರುತ್ತೇನೆ ಎಂದರು.

ಶಿರಾ ವಿಧಾನಸಭಾ ಕ್ಷೇತ್ರ ಕಳೆದುಕೊಂಡಿದ್ದು ಮನಸ್ಸಿಗೆ ತುಂಬಾ ನೋವಾಗಿದೆ. ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ರೈತರ ಸಾಲಮನ್ನಾವಾಗಲಿ ಅಥವಾ ಅಭಿವೃದ್ಧಿ ಕಾರ್ಯಗಳನ್ನಾಗಲಿ ಜನರು ಪರಿಗಣಿಸಲಿಲ್ಲ. ಈ ಬಗ್ಗೆ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳುತ್ತಿದೆ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

14/11/2020 02:48 pm

Cinque Terre

89.36 K

Cinque Terre

51

ಸಂಬಂಧಿತ ಸುದ್ದಿ