ಬೆಂಗಳೂರು: ಉಪ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಮಸ್ಕಿ ಕ್ಷೇತ್ರಕ್ಕೆ ದೀಪಾವಳಿ ಗಿಫ್ಟ್ ನೀಡಿದೆ.
ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಬಿಜೆಪಿ ಇದೀಗ ಬೀದರ್‌ನ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಕದನಕ್ಕೆ ಸಜ್ಜಾಗುತ್ತಿದೆ. ಹೀಗಾಗಿ ಉಪಚುನಾವಣೆಗೆ ದಿನಾಂಕ ಪ್ರಕಟವಾಗುವ ಮೊದಲೇ ರಾಜ್ಯ ಸರ್ಕಾರವು ಬಸವಕಲ್ಯಾಣದಲ್ಲಿ ಮರಾಠಿ ಮತಗಳ ಓಲೈಕೆಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ.
PublicNext
15/11/2020 05:53 pm