ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಮೂಲಕ ಮುಖ್ಯಮಂತ್ರಿ ಹುದ್ದೆಗೆ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ ಈ ಬಾರಿ ಇಬ್ಬರಿಗೆ ಉಪಮುಖ್ಯಮಂತ್ರಿ ಹುದ್ದೆ ವಹಿಸಲಾಗಿದೆ.
ಬಿಹಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಸುಶೀಲ್ ಕುಮಾರ್ ಮೋದಿ ಮುಂದುವರಿಯಲಿದ್ದಾರೆ ಎನ್ನಲಾಗಿತ್ತು. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಅವರಿಗೆ ಕೊಕ್ ನೀಡಲಾಗಿದೆ. ಡಿಸಿಎಂಗಳಾಗಿ ತಾರ್ ಕಿಶೋರ್ ಪ್ರಸಾದ್ ಹಾಗೂ ರೇಣು ದೇವಿ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
PublicNext
15/11/2020 09:40 pm