ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ರಾಜ್ಯ ಸಾರಿಗೆ ನೌಕರರಿಗೆ ಬಿಎಸ್‌ವೈ ಗುಡ್‌ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನೌಕರರ ಸಂಕಷ್ಟಕ್ಕೆ ಕೊನೆಗೂ ಸ್ಪಂದಿಸಿದೆ. ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವು ಸಾರಿಗೆ ನೌಕರರಿಗೆ ಸಂಬಳ ನೀಡಲು ಒಪ್ಪಿಗೆ ಸೂಚಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಲಕ್ಷ್ಮಣ ಸವದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. ಮನವಿಗೆ ಸ್ಪಂದಿಸಿರುವ ಅವರು 624 ಕೋಟಿ ರೂ. ನೀಡುವುದಕ್ಕೆ ಒಪ್ಪಿಕ್ಕೆ ಸೂಚಿಸಿದ್ದಾರೆ. ತಕ್ಷಣವೇ 2 ತಿಂಗಳ ವೇತನ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬಾಕಿ ಸಂಬಳವನ್ನು ಡಿಸೆಂಬರ್ ತಿಂಗಳ ವೇತನ ನಂತರ ಬಿಡುಗಡೆ ಮಾಡಲಾಗುವುದು ಎಂದು ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.

Edited By : Vijay Kumar
PublicNext

PublicNext

16/11/2020 01:28 pm

Cinque Terre

122.98 K

Cinque Terre

24

ಸಂಬಂಧಿತ ಸುದ್ದಿ