ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿತೀಶ್ ಪ್ರಮಾಣ ವಚನಕ್ಕೆ ನಾನೇಕೆ ಹೋಗಲಿ ಎಂದ ತೇಜಸ್ವಿ ಯಾದವ್

ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಗೈರು ಹಾಜರಾಗಲು ಆರ್‌ಜೆಡಿ ನಿರ್ಧರಿಸಿದೆ.

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಪಕ್ಷದ ಯಾವ ನಾಯಕರೂ ನಿತೀಶ್ ಕುಮಾರ್ ಪ್ರಮಾಣವಚನ ಸಮಾರಂಭಕ್ಕೆ ಹೋಗದಿರಲು ನಿರ್ಧಾರ ಕೈಗೊಂಡಿದ್ದಾರೆ. ಜನಾದೇಶಕ್ಕೆ ವಿರುದ್ಧವಾಗಿ ಸರ್ಕಾರ ರಚನೆಯಾಗುತ್ತಿದೆ. ಹೀಗಾಗಿ ನಾವು ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಬಹಿಷ್ಕರಿಸುತ್ತಿರುವುದಾಗಿ ತೇಜಸ್ವಿ ಯಾದವ್ ಸ್ಪಷ್ಟಪಡಿಸಿದ್ದಾರೆ. ನ್ಯಾಯಯುತವಾಗಿ ಚುನಾವಣೆ ಎದುರಿಸದೇ ಅಕ್ರಮ ಮಾರ್ಗವಾಗಿ ನಾಚಿಕೆಯಿಲ್ಲದೇ ಅಧಿಕಾರ ಹಿಡಿದಿರುವ ಎನ್‌ಡಿಎ ಮೈತ್ರಿಕೂಟ, ರಾಜ್ಯದ ಜನತೆಗೆ ಅಪಮಾನ ಮಾಡಿದೆ ಎಂದು ತೇಜಸ್ವಿ ಯಾದವ್ ಹರಿಹಾಯ್ದಿದ್ದಾರೆ.

Edited By : Nagaraj Tulugeri
PublicNext

PublicNext

16/11/2020 04:09 pm

Cinque Terre

64.74 K

Cinque Terre

9

ಸಂಬಂಧಿತ ಸುದ್ದಿ