ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಹಾರ ಸಿಎಂ ಆಗಿ ಏಳನೇ ಬಾರಿ ನಿತೀಶ್ ಪ್ರಮಾಣವಚನ

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಜೆಡಿಯು ನಾಯಕ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಫಗು ಚೌಹಾಣ್ ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್, ರಾಜ್ಯದ ಜನರ ಸೇವೆಗಾಗಿ ತಮ್ಮನ್ನು ಸಮರ್ಪಿಸಿಕೊಳ್ಳುವುದಾಗಿ ಭರವಸೆ ನೀಡಿದರು.

ಬಿಜೆಪಿಯಿಂದ ತಾರಕೇಶ್ವರ್ ಪ್ರಸಾದ್ ಹಾಗೂ ರೇಣುದೇವಿ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಬಿಹಾರಕ್ಕೆ ಇಬ್ಬರು ಉಪಮುಖ್ಯಮಂತ್ರಿಗಳು ಸಿಕ್ಕಂತಾಗಿದೆ. ಇನ್ನು ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ ಏಳನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದು, ಬಿಹಾರದ ರಾಜಕೀಯ ಇತಿಹಾಸದಲ್ಲೇ ಇದು ದಾಖಲೆಯಾಗಿದೆ.

Edited By : Nagaraj Tulugeri
PublicNext

PublicNext

16/11/2020 05:01 pm

Cinque Terre

80.22 K

Cinque Terre

6

ಸಂಬಂಧಿತ ಸುದ್ದಿ