ಬೆಂಗಳೂರು: ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಓಡಿ ಹೋಗಿದ್ದಾರೆ ಅಂತ ಹೇಳಿದ್ಯಾರು? ಅವರ ಆರೋಗ್ಯ ಸರಿ ಇರಲಿಲ್ಲ ಅಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬ್ಯಾಟ್ ಬೀಸಿದ್ದಾರೆ.
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ಅವರನ್ನು ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, 'ಪೊಲೀಸರು ಯಾವ ಕ್ರಮ ತಗೆದುಕೊಂಡಿದ್ದಾರೆ ಎನ್ನುವುದು ಕೂಡ ಗೊತ್ತಿದೆ. ಅಧಿಕಾರವನ್ನ ಬಳಸಿಕೊಂಡು ಕಾಂಗ್ರೆಸ್ಸಿಗರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ಕಾನೂನಿಗೆ ಎಲ್ಲರೂ ಗೌರವ ಕೊಡಲೇಬೇಕು. ಸಂಪತ್ ರಾಜ್ ಓಡಿ ಹೋಗಿದ್ದಾರೆ ಅಂತ ಹೇಳಿದವರು ಯಾರು? ಕಾನೂನಿಗಿಂತ ಸಂಪತ್ ರಾಜ್ ಮೇಲಲ್ಲ ಡಿಕೆಶಿಯೂ ಮೇಲಲ್ಲ. ಬಿಜೆಪಿಯವರೇ ಕಾನೂನನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಗುಡುಗಿದರು.
PublicNext
17/11/2020 12:04 pm