ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹತ್ವದ ಆದೇಶವನ್ನು ಮಾಡಿದ್ದಾರೆ.
ಈ ಬಗ್ಗೆ ಪ್ರಕರಣೆ ಹೊರಡಿಸಿರುವ ಸಿಎಂ ಬಿಎಸ್‌ವೈ, ''ರಾಜ್ಯದಲ್ಲಿ ವೀರಶೈವ- ಲಿಂಗಾಯತ ಸಮಾಜದ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಅಗತ್ಯವಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ನಿಗಮವನ್ನು ಸ್ಥಾಪನೆ ಮಾಡಲು ಆದೇಶಿಸಿದೆ'' ಎಂದು ತಿಳಿಸಿದ್ದಾರೆ.
PublicNext
17/11/2020 12:38 pm