ತುಮಕೂರು: ರಾಜ್ಯ ಸರ್ಕಾದ ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಆದೇಶಕ್ಕೆ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಿರುವುದು ನನಗೆ ಅಚ್ಚರಿ ತಂದಿದೆ. ರಾಜ್ಯ ಸರ್ಕಾರದ ಈ ನಿರ್ಧಾರ ಆಶ್ಚರ್ಯ ಉಂಟು ಮಾಡಿದೆ. ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ' ಎಂದು ಹೇಳಿದರು.
ಪ್ರಾಧಿಕಾರಗಳ ಬದಲು ಎಲ್ಲಾ ಸಮಾಜ ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರಿಗೆ ಹೆಚ್ಚು ಒತ್ತುಕೊಡುವ ಕೆಲಸ ಸರ್ಕಾರ ಮಾಡಿದರೆ ಒಳ್ಳೆಯದು ಎಂದು ಸಲಹೆ ನೀಡಿದರು.
PublicNext
17/11/2020 02:51 pm