ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡಯ ನಾಲಿಗೆ"

ಬೆಂಗಳೂರು: ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ, ಇತ್ತೀಚೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಬಗ್ಗೆ ಟೀಕಾತ್ಮಕವಾಗಿ ಮಾತನಾಡಿದ್ದರು. ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಅವರು ಅಧಿಕಾರಿಯೊಬ್ಬರ ಜೊತೆ ಫೋನ್‌ನಲ್ಲಿ ಮಾತನಾಡುವ ವೇಳೆ ‘ದೇವೇಗೌಡರ ಕುಟುಂಬದವರನ್ನು ಸೋಲಿಸಲು ಸುಮಲತಾ ಅವರನ್ನು ಗೆಲ್ಲಿಸಿದ್ದೀವಿ ಅಷ್ಟೇ. ಮಂಡ್ಯದಲ್ಲಿ ಒಂದು ಕೆಲಸ ಮಾಡೋದಕ್ಕೂ ಬಿಡುತ್ತಿಲ್ಲ. ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ ಏನೇ ಕೆಲಸ ಇದ್ದರೂ ನನಗೆ ಹೇಳಿ. ಆ ಯಮ್ಮಾ ಏನೂ ಕೆಲಸ ಮಾಡುವುದಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದರು.

ಪ್ರತಾಪ್‌ ಸಿಂಹ ಈ ಹೇಳಿಕೆ ನೀಡುತ್ತಿದ್ದಂತೆ ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪರ-ವಿರೋಧ ಚರ್ಚೆಗೂ ಗ್ರಾಸವಾಗಿತ್ತು. ಇಬ್ಬರೂ ಸಂಸದರ ನಡುವೆ ಕಳೆದ ಕೆಲ ದಿನಗಳಿಂದ ಟೀಕಾ ಪ್ರಹಾರ ನಡೆದಿತ್ತು. ಇದೀಗ ಸುಮಲತಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್‌ ಹಾಕುವ ಮೂಲಕ ಪ್ರತಾಪ್‌ ಸಿಂಹ ಅವರಿಗೆ ಟಾಂಗ್ ನೀಡಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಸುಮಲತಾ ಅವರು, ‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ.. ವಿಚಾರವಿಲ್ಲದೆ ಪರರ ದೂಷಿಸುವುದಕ್ಕೆ ಚಾಚಿಕೊಂಡಿರುವಂತ ನಾಲಿಗೆ’ ಎಂದು ಪುರಂದರದಾಸರ ಕೀರ್ತನೆಯ ಸಾಲನ್ನು ಹಾಕಿದ್ದಾರೆ.

Edited By : Nagaraj Tulugeri
PublicNext

PublicNext

17/11/2020 03:56 pm

Cinque Terre

56.8 K

Cinque Terre

2

ಸಂಬಂಧಿತ ಸುದ್ದಿ