ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ದಲಿತರ ಮೇಲೆ ಕಾಂಗ್ರೆಸ್‌ಗೆ ಬರೀ ಮೊಸಳೆ ಕಣ್ಣೀರು'

ಬೆಂಗಳೂರು: ಡಿ.ಜೆ.ಹಳ್ಳಿ ಪ್ರಕರಣದಿಂದ ದಲಿತರ ಮೇಲೆ ಕಾಂಗ್ರೆಸ್​ಗೆ ಇರುವುದು ಬರೀ ಮೊಸಳೆ ಕಣ್ಣೀರು ಎನ್ನುವುದನ್ನು ಸಾಬೀತುಪಡಿಸುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತ ಶಾಸಕನ ಮನೆ ಮೇಲೆ ದಾಳಿ ನಡೆಸಿ ಕೊಲೆಗೆ ಪ್ರಯತ್ನ ನಡೆದಿತ್ತು. ಆದರೆ ಘಟನೆಗೆ ಕಾರಣವಾದವರನ್ನ ಬಂಧಿಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಾಗಲಿ ಅಥವಾ ಇತರ ಕಾಂಗ್ರೆಸ್ ನಾಯಕರಾಗಲಿ ಪ್ರತಿಭಟನೆ ಮಾಡಲಿಲ್ಲ ಎಂದು ದೂರಿದರು.

ನನಗೆ ಬೆಂಬಲ ನೀಡಿ, ನ್ಯಾಯ ಕೊಡಿಸಿ ಎಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಕಾಂಗ್ರೆಸ್ ನಾಯಕರ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಆದರೂ ಕಾಂಗ್ರೆಸ್ ಸಹಾಯ ಮಾಡಲಿಲ್ಲ. ಕಾಂಗ್ರೆಸ್ ನಾಯಕರು ಮಾಜಿ ಮೇಯರ್ ಸಂಪತ್ ರಾಜ್ ಪರವೋ ಅಥವಾ ತಮ್ಮದೇ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಪರವೋ ಹೇಳಬೇಕು ಎಂದು ಕುಟುಕಿದರು.

Edited By : Vijay Kumar
PublicNext

PublicNext

17/11/2020 04:47 pm

Cinque Terre

37.78 K

Cinque Terre

1

ಸಂಬಂಧಿತ ಸುದ್ದಿ