ಮಂಡ್ಯ: ಅಭಿವೃದ್ಧಿಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಹಕರಿಸಿದ ಸಿಎಂ ಬಿಎಸ್‍ವೈಗೆ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಥ್ಯಾಂಕ್ಸ್ ಹೇಳಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ತೆರೆ ಬಿದ್ದಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯುವಲ್ಲಿ ಸಕ್ಸಸ್ ಆಗಿವೆ. ಅದರಂತೆ ಬಿಜೆಪಿಯ ಸಿ.ಪಿ.ಅಶೋಕ್ ಅಧ್ಯಕ್ಷರಾದರೆ ಜೆಡಿಎಸ್ ಬೆಂಬಲಿತ ಅಶೋಕ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮೈತ್ರಿ ಪಕ್ಷಗಳು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ಕರೆದೊಯ್ದಿವೆ.
ಈ ವಿಚಾರವಾಗಿ ಇಂದು ಮಾಧ್ಯಮಗಳ ಜೊತೆ ಮಾತನಾಡಿರುವ ನಿಖಿಲ್, ಮೈತ್ರಿಕೂಟದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಹಕರಿಸಿದ ಸಿಎಂ ಬಿಎಸ್‍ವೈಗೆ ಧನ್ಯವಾದ ತಿಳಿಸಿದ್ದಾರೆ.
ಇದೇ ವೇಳೆ ಸಂಸದರಾದ ಸುಮಲತಾ ಮತ್ತು ಪ್ರತಾಪ್ ಸಿಂಹ ನಡುವಿನ ಕೆಸರೆರೆಚಾಟದಲ್ಲಿ ನಾನು ಮಧ್ಯ ಬರೋದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
PublicNext
17/11/2020 06:22 pm