ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಆದೇಶಿಸಿದೆ. ಕೋವಿಡ್ ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಸೂಕ್ತ ಸಿದ್ಧತೆ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ. ಬಸವರಾಜು ಸೂಚಿಸಿದ್ದಾರೆ.
ಆಯುಕ್ತ ಬಸವರಾಜು ಅವರು ಇಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಜನಸಂದಣಿಯಾಗದಂತೆ ಹಾಗೂ ಸಿಬ್ಬಂದಿಗಳ ಕೊರತೆಯಾಗದಂತೆ ಯೋಜಿಸಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
PublicNext
17/11/2020 09:17 pm