ಬೆಂಗಳೂರು: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಷಯ ವಿವಾದದ ಕಿಡಿ ಹೊತ್ತಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದ ಅಭಿವೃದ್ಧಿಗಾಗಿ ರಚಿಸಲಾಗಿದ್ದೇವೆ, ಇದಕ್ಕೂ ಮರಾಠಿ ಭಾಷೆಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿ ಉದ್ದೇಶಕ್ಕಾಗಿ ರಚಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ. ಇನ್ನು, ಮರಾಠ ಜನಾಂಗದವರು ತಲತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದಾರೆ. ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ.
PublicNext
17/11/2020 09:56 pm