ಬೆಂಗಳೂರು: ಸಚಿವ ಸಂಪುಟ ಸಭೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಉಪ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರು. ಹೀಗಾಗಿ ಇಂದು ಬೆಳಗ್ಗೆ 10:30ಕ್ಕೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಸಭೆ ಬಳಿಕ ಬೆಳಗ್ಗೆ 11:30ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಅವರು ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಯಾರಿಗೆ ಸಚಿವಸ್ಥಾನ ನೀಡಬೇಕು ಹಾಗೂ ಯಾರನ್ನು ಸಂಪುಟದಿಂದ ಕೈಬಿಡಬೇಕು ಎಂಬ ಮಹತ್ವದ ಪಟ್ಟಿಯನ್ನು ಸಿಎಂ ಬಿಎಸ್‌ವೈ ಹೈಕಮಾಂಡ್‌ಗೆ ನೀಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸಂಪುಟದಲ್ಲಿ ಸದ್ಯ ಏಳು ಸಚಿವ ಸ್ಥಾನಗಳು ಖಾಲಿ ಇವೆ. ನಾಲ್ಕೈದು ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಸಿಎಂ ಗಂಭೀರವಾಗಿ ಚಿಂತಿಸಿದ್ದಾರೆ. ಇದರಿಂದ ಖಾಲಿ ಉಳಿಯುವ ಸಚಿವ ಸ್ಥಾನಗಳ ಸಂಖ್ಯೆ 11 ಇಲ್ಲವೇ 12ಕ್ಕೆ ಏರಿಕೆಯಾಗಲಿದೆ.
PublicNext
18/11/2020 10:29 am